ಪ್ರಜಾಸ್ತ್ರ ಸುದ್ದಿ
ರಾಯಚೂರು(Raichoru): ಪಿಕ್ ಅಪ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ 8 ಜನರು ಮೃತಪಟ್ಟಿರುವ ಘಟನೆ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಹತ್ತಿರ ನಡೆದಿದೆ. ಐವರು ಮಹಿಳೆಯರು ಸೇರಿ 8 ಜನರು ಮೃತಪಟ್ಟಿದ್ದಾರೆ. 21 ಜನರ ತಂಡ ಪಿಕ್ ಅಪ್ ವಾಹನದಲ್ಲಿ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಬರುತ್ತಿದ್ದಾಗ ಈ ಘಟನೆ ನಡೆದಿದೆ.
ಅಪಘಾತದಲ್ಲಿ 9 ಜನರು ಗಂಭೀರವಾಗಿ ಗಾಯಗೊಂಡಿದ್ದು, ಕರ್ನೂಲ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ 4 ಜನರ ಸ್ಥಿತಿ ಗಂಭೀರವಾಗಿದೆಯಂತೆ. ಮೃತರನ್ನು ಕುಮಾರ್(50), ದೀಪಿಕಾ(40), ಯಶೋಧಾ(60), ಸುನೀಲ್(40), ಪುಟ್ಟಮ್ಮ(55), 5 ವರ್ಷದ ಮಗು ಬೆಳ್ಳಿ, ಲೋಲಾಕ್ಷಿ ಮೃತದುರ್ದೈವಿಗಳು ಎಂದು ತಿಳಿದು ಬಂದಿದೆ. ಇವರೆಲ್ಲ ಚಿಕ್ಕಮಗಳೂರು ಭಾಗದ ವಿವಿಧ ಗ್ರಾಮದ ಜನರಾಗಿದ್ದಾರೆ. ಮಂತ್ರಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



