ಪ್ರಜಾಸ್ತ್ರ ಸುದ್ದಿ
ಲಖನೌ(Laknow): ಪತ್ನಿ ಹಾಗೂ ತಂಗಿಯನ್ನು ಕೊಂದು ಬಳಿಕ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಲಖನೌ ನಗರದ ನವಾಬರ ನಗರಿಯಲ್ಲಿ ನಡೆದಿದೆ. ಎಸ್ ಬಿಐ ಬ್ಯಾಂಕ್ ಉದ್ಯೋಗಿ ಮಾನಸ್ ವಾಜಪೇಯಿ(38) ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗೋಮತಿನಗರದ ವಾಣಿಜ್ಯ ಕಟ್ಟಡದಲ್ಲಿರುವ ಐಸಿಐಸಿಐ ಬ್ಯಾಂಕ್ ಗೆ ತೆರಳಿದ್ದಾನೆ. ಅಲ್ಲಿ ಮಾನಸ್ ಪತ್ನಿ ದಿವ್ಯಾ ಕೆಲಸ ಮಾಡುತ್ತಿದ್ದು, ಆಕೆಯನ್ನು ಮಾತನಾಡಿಸುವ ನೆಪದಲ್ಲಿ ಹೊರಗೆ ಕರೆದಿದ್ದಾನೆ. ನಂತರ ಎದೆಗೆ ಗುಂಡು ಹಾರಿಸಿ ಅಲ್ಲಿಂದ ಸೀದಾ ಮನೆಗೆ ಬಂದಿದ್ದಾನೆ. ಮಾನಸಿಕ ಅಸ್ವಸ್ಥ ತಂಗಿಯ ಮೇಲೂ ಗುಂಡು ಹಾರಿಸಿದ್ದಾನೆ. ನಂತರ ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪತ್ನಿಯ ಮೇಲೆ ಗುಂಡಿನ ದಾಳಿ ಮಾಡಿದ ಬಳಿಕ ವಾಟ್ಸಪ್ ಸ್ಟೇಟಸ್ ಹಾಕಿದ್ದಾನಂತೆ. ನನಗೆ ಮೋಸ ಮಾಡಿದ ಪತ್ನಿಯನ್ನು ಮುಗಿಸಿದ್ದೇನೆ. ನಾನು, ತಂಗಿ ಹೊರಡುತ್ತಿದ್ದೇನೆ ಎಂದು ಬರೆದಿದ್ದಾನೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.



