LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶ ವಿಸರ್ಜನೆ ವೇಳೆ ಗಾಳಿಯಲ್ಲಿ ಗುಂಡು..!

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ತಾಲೂಕಿನ ಬಂದಾಳ ಗ್ರಾಮದಲ್ಲಿ ನಡೆದಿದೆ. ಪ್ರಶಾಂತ ಬಿರಾದಾರ ಹಾಗೂ ಮುದಕಪ್ಪ ಮಾದರ ಅನ್ನೋ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದೆ. ಮಂಗಳವಾರ ರಾತ್ರಿ ಮರಗಮ್ಮದೇವಿ ಗಜಾನನ ಯುವಕ ಮಂಡಳಿಯ ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಇವರಿಬ್ಬರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಸಾಮಾಜಿಕ(Social Media) ಜಾಲತಾಣದಲ್ಲಿ ವೈರಲ್ ಆಗಿದೆ.

ಪ್ರಶಾಂತ​ ಬಿರಾದಾರ ಬಳಿಯಿದ್ದ ಪರವಾನಿಗೆ ಹೊಂದಿದ ಪಿಸ್ತೂಲ್​ನಿಂದ(Gun) ಮುದಕಪ್ಪ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಇದಕ್ಕೂ ಮೊದಲು ಪ್ರಶಾಂತ​ ಕೂಡ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದ ಎನ್ನುವ ಆರೋಪ ಕೇಳಿ ಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಪರವಾನಿಗೆ ಹೊಂದಿದ ಪಿಸ್ತೂಲ್​ನನ್ನು ಮತ್ತೊಬ್ಬರ ಕೈಗೆ ಕೊಟ್ಟ ಪ್ರಶಾಂತನನ್ನು, ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಉಲ್ಲಂಘನೆ ಮಾಡಿದ್ದ ಆರೋಪದ ಮೇಲೆ ಸಿಂದಗಿ ಪೊಲೀಸ್(Police) ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST