ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬಹುಭಾಷಾ ನಟ ಪ್ರಕಾಶ್ ರಾಜ್, ಮಹಾಕುಂಭ ಮೇಳದಲ್ಲಿ ಭಾಗವಹಿಸಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎನ್ನುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಇದು ವೈರಲ್ ಆಗಿ ಹಲವು ರೀತಿಯ ಕಾಮೆಂಟ್ಸ್ ಗಳು ಬಂದಿವೆ. ಇದಕ್ಕೆ ಸ್ಪಷ್ಟನೆ ಕೊಟ್ಟಿರುವ ಪ್ರಕಾಶ್ ರಾಜ್, ಸುಳ್ಳು ಸುದ್ದಿ.. ಸುಳ್ಳು ರಾಜನ ಹೇಡಿಗಳ ಸೈನ್ಯಕ್ಕೆ ಅವರ ಪವಿತ್ರ ಪೂಜೆಯಲ್ಲೂ ಸುಳ್ಳಿ ಸುದ್ದಿ ಹಬ್ಬಿಸಿ ಹೊಲಸು ಮಾಡುವುದೇ ಕೆಲಸ. ಪೊಲೀಸ್ ದೂರು ದಾಖಲಿಸಿದ್ದೇನೆ. ಕೋರ್ಟಿನ ಕಟಕಟೆಯಲ್ಲಿ ಏನು ಮಾಡುತ್ತಾರೋ ನೋಡೋಣ ಎಂದು ಬರೆದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
https://twitter.com/prakashraaj/status/1884249289695830273



