ಪ್ರಜಾಸ್ತ್ರ ಸುದ್ದಿ
ಜೈಪುರ(Jaipura): ಭಾನುವಾರ ಸಂಜೆ ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುಣೆ-ಜೈಪುರ ಸೂಪರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಲಾರೆನ್ಸ್ ಬಿಷ್ಟೋಯಿ ಗ್ಯಾಂಗ್ ನ ಸಹಚರ ಎನ್ನಲಾದ ಅನಿಲ್ ಪಂಡಿತ್ ಎಂಬಾತನೊಂದಿಗೆ ಬಂಧಿತರಲ್ಲಿ ಓರ್ವ ನಿರಂತರ ಸಂಪರ್ಕದಲ್ಲಿದ್ದ ಎನ್ನಲಾಗುತ್ತಿದೆ.
ಮುಂಬೈನ ಜುಹು ಪ್ರದೇಶದಲ್ಲಿ ಭಾನುವಾರ ಸಂಜೆ ದಾಳಿ ಮಾಡಲಾಗಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ನಟ ಟೈಗರ್ ಶ್ರಾಫ್ ಸೇರಿದಂತೆ ಯಾರಿಗೂ ಏನೂ ಆಗಿಲ್ಲ. ಮುಂಬೈ ಪೊಲೀಸರು ಈಗಾಗ್ಲೇ ಕೋಟಾ ತಲುಪಿದ್ದು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ.
ಕೃತ್ಯವೆಸಗಿದ ಬಳಿಕ ಟ್ರೇನ್ ಮೂಲಕ ಜೈಪುರಕ್ಕೆ ಪ್ರಯಾಣ ಬೆಳೆಸಿದ್ದರು. ಅಲ್ಲಿಂದ ಬಸ್ ಮೂಲಕ ದೆಹಲಿಗೆ ಹೋಗಿ ನಂತರ ಗಡಿ ದಾಟಿ ನೇಪಾಳಕ್ಕೆ ಪರಾರಿಯಾಗಲು ಯತ್ನಿಸಿದ್ದರು ಎಂದು ಎಸ್ಪಿ ತೇಜಸ್ವಿನಿ ಗೌತಮ್ ತಿಳಿಸಿದ್ದಾರೆ. ಈ ಒಂದು ಕಾರ್ಯಾಚರಣೆಯಲ್ಲಿ ಗ್ಯಾಂಗ್ ಸ್ಟರ್ ನಿಗ್ರಹ ಪಡೆ, ರೈಲ್ವೆ ರಕ್ಷಣಾ ಪಡೆ ನೆರವಾಗಿದ್ದರು ಎಂದು ತಿಳಿಸಲಾಗಿದೆ.


