ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ಎಐಎಡಿಎಂಕೆ ಪಕ್ಷಕ್ಕೆ ಖ್ಯಾತ ನಟಿ ಗೌತಮಿ ತಡಿಮಲ್ಲ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಈ ಬಗ್ಗೆ ತಿಳಿಸಿದ್ದಾರೆ. ಪ್ರಸ್ತುತ ತಮಿಳುನಾಡಿನ ರಾಜಕೀಯ ಪರಿಸ್ಥಿತಿ ಹಿನ್ನಲೆಯಲ್ಲಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ.ಕೆ ಪಳನಿಸ್ವಾಮಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಪ್ರಚಾರದ ಉಪ ಕಾರ್ಯದರ್ಶಿ ಹುದ್ದೆಗೂ ರಾಜೀನಾಮೆ ನೀಡುತ್ತಿದ್ದೇನೆ. ಪಕ್ಷಕ್ಕೆ ಸೇರಿದ ದಿನದಿಂದ ಎಲ್ಲ ರೀತಿಯಿಂದ ಸಹಕರಿಸಿದ ಎಐಡಿಎಂಕೆ ಮಾಜಿ ಸಚಿವರಿಗೆ, ಹಿರಿಯರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳು ಎಂದಿದ್ದಾರೆ. 10 ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ಗೌತಮಿ 2023 ಅಕ್ಟೋಬರ್ ನಲ್ಲಿ ಬಿಜೆಪಿ ತೊರೆದಿದ್ದರು. 2024 ಫೆಬ್ರವರಿಯಲ್ಲಿ ಎಐಎಡಿಎಂಕೆ ಸೇರ್ಪಡೆಯಾಗಿದ್ದರು.



