LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆಶಿ ಆಪ್ತ ಎಸ್.ರವಿಗೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಆಪ್ತ ಹಾಗೂ ಪರಿಷತ್ ಸದಸ್ಯ ಎಸ್.ರವಿ ಅವರಿಗೆ ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಾದಿ ಒಲಿದಿದೆ. ಶರಣಗೌಡ ಪಾಟೀಲ ಬಯ್ಯಾಪುರ ಉಪಾಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಇವರಿಬ್ಬರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಜನವರಿಯಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ, ಅಭ್ಯರ್ಥಿಗಳ ವಿಚಾರದಲ್ಲಿ ಸಾಕಷ್ಟು ರಾಜಕೀಯ ಜಿದ್ದಾಜಿದ್ದುಗಳು ನಡೆದ ಪರಿಣಾಮ ಇಲ್ಲಿಗೆ ಬಂದಿದೆ. ಸಿದ್ದರಾಮಯ್ಯ ಆಪ್ತ, ಮಾಜಿ ಸಚಿವ ಕೆ.ಎನ್.ರಾಜಣ್ಣ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು. ಇದಕ್ಕೆ ಡಿ.ಕೆ.ಶಿವಕುಮಾರ ಕಡೆಯಿಂದ ವಿರೋಧ ವ್ಯಕ್ತವಾಗಿತ್ತು.

ಬುಧವಾರ ಸಹಕಾರ ಸಚಿವ ಲಕ್ಷ್ಮಣ ಸವದಿ ಅವರು ಬ್ಯಾಂಕಿನ 19 ನಿರ್ದೇಶಕರೊಂದಿಗೆ ಸಭೆ ನಡೆಸಿದ್ದರು. ಬಹುತೇಕ ನಿರ್ದೇಶಕರು ಎಸ್.ರವಿ ಪರವಾಗಿ ಬೆಂಬಲ ಸೂಚಿಸಿದರು. ಹೀಗಾಗಿ ಇಂದು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST