ಪ್ರಜಾಸ್ತ್ರ ಸುದ್ದಿ
ಮಂಗಳೂರು(Mangaloru): ಸಚಿವ ಸ್ಥಾನ ಪಡೆಯಲು ಹೈಕಮಾಂಡ್ ಭೇಟಿಯಾಗಿದ್ದೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಭಾಧ್ಯಕ್ಷ ಯು.ಟಿ ಖಾದರ್, ಈ ಹಿಂದೆ ಸರ್ಕಾರ ರಚನೆಯಾಗುವಾಗಲು ನನ್ನ ಹೆಸರು ಮುಂಚೂಣೆಯಲ್ಲಿತ್ತು. ಆದರೆ, ನಾನು ಸಭಾಧ್ಯಕ್ಷನಾದೆ. ಈಗಲೂ ಅದೇ ಸ್ಥಾನದಲ್ಲಿರುವುದರಿಂದ ರಾಜಕೀಯ ಮಾತನಾಡುವುದಿಲ್ಲ. ಸದ್ಯಕ್ಕೆ ನನ್ನ ತಲೆಯಲ್ಲಿ ಪಕ್ಷವೇ ಇಲ್ಲ ಎಂದರು.
ಸಭಾಧ್ಯಕ್ಷನಾಗಿರುವ ಕಾರಣ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭದಲ್ಲಿ ವೇದಿಕೆ ಮೇಲೆ ಇರುತ್ತೇನೆ. ಒಂದು ವೇಳೆ ಮಂತ್ರಿಯಾದರೆ ವೇದಿಕೆ ಏರಬಹುದು. ಶಾಸಕನಾದರೆ ವೇದಿಕೆ ಮುಂದೆ ಕುಳಿತುಕೊಳ್ಳಬೇಕು. ಸಚಿವನಾಗುತ್ತೇನೋ ಇಲ್ಲವೋ ಗೊತ್ತಿಲ್ಲ. ಒಂದು ವೇಳೆ ಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಸಂಗ ಬಂದರೆ ಉಪ ಸಭಾಧ್ಯಕ್ಷರಿಗೆ ಅಥವ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿಗೆ ಸಲ್ಲಿಸಬೇಕು ಅಂತಾ ಹೇಳಿದರು.



