LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆತಿಶಿ ದೆಹಲಿ ನೂತನ ಮುಖ್ಯಮಂತ್ರಿ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ದೆಹಲಿ ನೂತನ ಮುಖ್ಯಮಂತ್ರಿಯಾಗಿ ಸಚಿವೆ ಆತಿಶಿ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಆಪ್ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಆತಿಶಿ(Atishi Marlena) ಹೆಸರು ಪ್ರಸ್ತಾಪಿಸಿದರು. ಇದಕ್ಕೆ ಎಲ್ಲ ಶಾಸಕರು ಒಪ್ಪಿಗೆ ಸೂಚಿಸಿದರು. ಹೀಗಾಗಿ ಕೇಜ್ರಿವಾಲ್ ಬಳಿಕ ಸಿಎಂ ಸ್ಥಾನಕ್ಕೆ ಆತಿಶಿ ಬರುತ್ತಿದ್ದಾರೆ. ಇಂದು ಸಂಜೆ ಲೆಫ್ಟಿನೆಂಟ್ ಗವರ್ನರ್ ಅವರನ್ನು ಕೇಜ್ರಿವಾಲ್ ಭೇಟಿಯಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಕೇಜ್ರಿವಾಲ್ ನಿಷ್ಠರಲ್ಲಿ ಆತಿಶಿ ಗುರುತಿಸಿಕೊಂಡಿದ್ದಾರೆ. ಅವರು ಜೈಲಿಗೆ ಹೋದಾಗ ಹಲವು ಇಲಾಖೆಗಳನ್ನು ಜವಾಬ್ದಾರಿ ನೋಡಿಕೊಂಡಿದ್ದಾರೆ. ದೆಹಲಿಗೆ ನೀರು ಬಿಡುವ ಸಂಬಂಧ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಸ್ವಾತಂತ್ರ್ತೋತ್ಸವ ವೇಳೆ ಧ್ವಜಾರೋಹಣಕ್ಕೆ ಆತಿಶಿ ಹೆಸರನ್ನೇ ಕೇಜ್ರಿವಾಲ್ ಸೂಚಿಸಿದ್ದರು. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ್ದ ಕೇಜ್ರಿವಾಲ್(Arvind Kejriwal) ಇತ್ತೀಚೆಗಷ್ಟೇ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅವರು, ಜನರು ತಮ್ಮನ್ನು ಪ್ರಾಮಾಣಿಕ ಎಂದು ಒಪ್ಪಿಕೊಂಡ ಬಳಿಕ ಮತ್ತೆ ಅಧಿಕಾರ ವಹಿಸಿಕೊಳ್ಳುತ್ತೇನೆ ಎಂದಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST