ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ನೀಡಿದೆ. ಷರತ್ತುಬದ್ಧ ಜಾಮೀನು ನೀಡಿದ್ದು, ಜೈಲಿನಿಂದ ಕಳೆದ ರಾತ್ರಿಯೇ ಬಿಡುಗಡೆಯಾಗಿದ್ದಾರೆ. ಜೀವಾವಧಿ ಶಿಕ್ಷೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದಕ್ಕೆ ತಡೆಯಾಜ್ಞೆ ನೀಡಿ ಷರತ್ತುಬದ್ಧ ಜಾಮೀನು ನೀಡಿದೆ. ಇದರ ಜೊತೆಗೆ ಉಳಿದ 9 ಮಂದಿಗೂ ಸಹ ಜಾಮೀನು ನೀಡಲಾಗಿದೆ.
5 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದೆ. ಹೀಗಾಗಿ ಮತ್ತೆ ಶಾಸಕ ಸ್ಥಾನಕ್ಕೆ ಫೈಟ್ ನಡೆಯುವ ಸಾಧ್ಯತೆಯಿದೆ. ಇದರ ಜೊತೆಗೆ ಈಗ ಜನರಲ್ಲಿ ಕಾಡುತ್ತಿರುವ ಪ್ರಶ್ನೆ, ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನಗೆ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೋಯಿತು. ಈಗ ಸರ್ಕಾರ ವಿನಯ ಕುಲಕರ್ಣಿ ಜಾಮೀನು ರದ್ದತಿಗೆ ಕೋರಿ ಸುಪ್ರೀಂ ಕೋರ್ಟ್ ಮಟ್ಟಿಲು ಹತ್ತುತ್ತಾ ಅಥವ ತಮ್ಮ ಪಕ್ಷದ ನಾಯಕ ಎಂದು ಸುಮ್ಮನಾಗುತ್ತಾ ಕಾದು ನೋಡಬೇಕಿದೆ.



