ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸ್ಟಿಂಗ್ ವಿಚಾರದಲ್ಲಿ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯ ಪ್ರವೇಶಿಸಿದರೆ ಇದು ದೊಡ್ಡ ಮಟ್ಟದಲ್ಲಿ ಬೆಳವಣಿಗೆಗೆ ಕಾರಣವಾಗಲಿದೆ. ಬೇರೆ ಆಯಾಮದೊಂದಿಗೆ ಚರ್ಚೆಗೆ ಬರಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಶುಕ್ರವಾರ ಸಂಜೆ ಪಕ್ಷದ ಮುಖಂಡರೊಂದಿಗೆ ಈಗಲ್ಟನ್ ರೆಸಾರ್ಟ್ ನಲ್ಲಿ ಹಮ್ಮಿಕೊಂಡಿದ್ದ ಸಭೆಯ ಬಳಿಕ ಮಾತನಾಡಿದ ಅವರು, ಆರ್.ಅಶೋಕ್ ಅವರು ಹೇಳಿದಂತೆ 15 ಕೋಟಿಗೂ ಹೆಚ್ಚಿನ ಹಣದ ವ್ಯವಹಾರ ನಡೆದಿದೆ. ಸ್ಟಿಂಗ್ ಆಪರೇಷನ್ ರಾಜ್ಯ ಮಾನ ಮರ್ಯಾದೆಯನ್ನು ರಾಷ್ಟ್ರಮಟ್ಟದಲ್ಲಿ ಹರಾಜು ಹಾಕುವ ಬೆಳವಣಿಗೆಯಾಗಿದೆ ಎಂದು ಪರೋಕ್ಷವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ಕಿಡಿ ಕಾರಿದರು.


