ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಬಿಜೆಪಿ ಶಾಸಕರ ಮೇಲೆ ಕಾಂಗ್ರೆಸ್ ನಿಂದ ಹಲ್ಲೆ ನಡೆಸಲಾಗಿದೆ. ಪುಡಿ ರೌಡಿಗಳ ಕಾಂಗ್ರೆಸ್ ಸರ್ಕಾರಕ್ಕೆ, ಪ್ರತಿಭಟನೆಗಳ ಮೇಲೆ ದಾಳಿ ನಡೆಸುವ ಕೊತ್ವಾಲ್ ಶಿಷ್ಯಂದಿರು ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಘೋಷಣೆ ಕೂಗಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ವಿಧಾನಸೌಧದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸುವ ಮೂಲಕ ಸಿಎಂ ಡಿ.ಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಹರಿಹಾಯ್ದರು.
ಕಾನೂನು ಕೈಗೆತ್ತಿಕೊಂಡು ರೌಡಿಸಂ ಸಂಸ್ಕೃತಿ ಮೆರೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.



