ಪ್ರಜಾಸ್ತ್ರ ಸುದ್ದಿ
ಬಳ್ಳಾರಿ(Ballari): ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭ ಗುರುವಾರ ಸಂಜೆ ನಡೆಯಲಿದೆ. ಸೆಪ್ಟೆಂಬರ್ 9ರಂದು ಬಳ್ಳಾರಿ ತಲುಪಿದೆ. ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಸುಮಾರು 50 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.
ಕಳೆದ 10 ದಿನಗಳಿಂದ ಪಾದಯಾತ್ರೆ ನಡೆಸಲಾಯಿತು. ಮುಂಜಾನೆ ನಗರದ ಪ್ರಮುಕ ದೇವಸ್ಥಾನಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಲಿದ್ದಾರೆ. ನಂತರ ನಗರದ ವಾಲ್ಮೀಕಿ ವೃತ್ತದಿಂದ ಪಾದಯಾತ್ರೆ ಶುರುವಾಗಿ ರಾಜಕುಮಾರ ರಸ್ತೆಯ ಮೂಲಕ ಮುನ್ಸಿಪಲ್ ಕಾಲೇಜು ಮೈದಾನಕ್ಕೆ ಬರಲಿದ್ದಾರೆ. ಬಳಿಕ ಕಾರ್ಯಕ್ರಮ ನಡೆಯಲಿದೆ.


