LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರವಾಹ ಪೀಡಿತ ಪ್ರದೇಶಗಳಿಗೆ ನಾಳೆಯಿಂದ ಬಿಜೆಪಿ ಭೇಟಿ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿ(Rain) ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಆಯಾ ಭಾಗದ ಜನಪ್ರತಿನಿಧಿಗಳು, ಸಚಿವರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ರೀತಿ ಮಂಗಳವಾರದಿಂದ ಬಿಜೆಪಿ ತಂಡ ಪ್ರವಾಹ(Flood) ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಲಿದೆ. ಇದಕ್ಕಾಗಿ 6 ತಂಡಗಳನ್ನು ರಚಿಸಲಾಗಿದೆ.

ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತಂಡ ಬೆಳಗಾವಿ, ಮಂಗಳೂರು ಜಿಲ್ಲೆಗಳಿಗೆ ಭೇಟಿ ನೀಡಲಿದೆ. ಪರಿಷತ್ ವಿಪಕ್ಷ ನಾಯಕ ಛಲವಾಧಿ ನಾರಾಯಣಸ್ವಾಮಿ ತಂಡ ರಾಯಚೂರು, ಯಾದಗಿರಿ, ಮಾಜಿ ಸಚಿವ ಸಿ.ಎನ್ ಅಶ್ವತ್ಥನಾರಾಯಣ ತಂಡ ಉಡುಪಿ, ಕೊಡಗು, ಮಾಜಿ ಸಚಿವ ಆರಗ ಜ್ಞಾನೇಂದ್ರ ತಂಡ ಶಿವಮೊಗ್ಗ, ಮಾಜಿ ಸಚಿವ ಶ್ರೀರಾಮುಲು ತಂಡ ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ಶಾಸಕ ಅರವಿಂದ್ ಬೆಲ್ಲದ್ ತಂಡ ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST