LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೈಗಾರಿಕಾ ಪ್ರದೇಶದಲ್ಲಿ ಸ್ಫೋಟ: 54 ಜನರಿಗೆ ಗಾಯ, 18 ಜನರು ನಾಪತ್ತೆ

ಪ್ರಜಾಸ್ತ್ರ ಸುದ್ದಿ

ದೋಹಾ(Doha): ಕೈಗಾರಕಾ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸ್ಫೋಟ ಸಂಭವಿಸಿದೆ. ಈ ವೇಳೆ 54 ಜನರು ಗಾಯಗೊಂಡಿದ್ದು, 14 ಜನರು ನಾಪತ್ತೆಯಾಗಿದ್ದಾರೆ. ಕತಾರ್ ನ ರಾಸ್ ಲಫಾನ್ ಕೈಗಾರಿಕಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಈ ಘಟನೆ ನಡೆದಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

ನಾಪತ್ತೆಯಾದವರ ಪತ್ತೆ ಕಾರ್ಯ ನಡೆಸಲಾಗುತ್ತಿದೆ. ಕತಾರ್ ಇಂಟರ್ ನ್ಯಾಷನಲ್ ಸರ್ಚ್ ಅಂಡ್ ರಸ್ಕ್ಯೂ ಗ್ರೂಪ್ ಆಫ್ ದಿ ಇಂಟರ್ನಲ್ ಫೋರ್ಸ್ ಪತ್ತೆ ಕೆಲಸ ಮಾಡುತ್ತಿದೆ. ಕೊಲ್ಲಿ ರಾಷ್ಟ್ರಗಳ ಇಂಧನ ಮೂಲಸೌಕರ್ಯ ಗುರಿಯಾಗಿಸಿ ಇರಾನ್ ದಾಳಿ ಮಾಡಿದ ಸಂದರ್ಭದಲ್ಲಿ ಇದು ಪ್ರಮುಖ ಟರ್ಮಿನಲ್ ಆಗಿತ್ತು. ನಂತರ ಕೆಲವು ದಿನಗಳ ಕಾಲ ಮುಚ್ಚಲಾಗಿತ್ತು. ಕೆಲಸ ಮರು ಪ್ರಾರಂಭವಾದ ಹಿನ್ನಲೆಯಲ್ಲಿ ಕಾರ್ಮಿಕರು ಕೆಲಸಕ್ಕೆ ಬರುತ್ತಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST