ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): 18ಬೇ ಬ್ರಿಕ್ಸ್ ಶೃಂಗಸಭೆಯು ಶನಿವಾರದಿಂದ ನಡೆಯುತ್ತಿದೆ. ಭಾರತ ಇದರ ಆತಿಥ್ಯ ವಹಿಸಿಕೊಂಡಿದೆ. ದೆಹಲಿಯ ಭಾರತ ಮಂಟಪದಲ್ಲಿ ಸಭೆ ನಡೆಯಲಿದ್ದು, ಚೀನಾ ಅಧ್ಯಕ್ಷ ಷಿ ಜಿನ್ ಪಿಂಗ್ ದೆಹಲಿಗೆ ಬಂದಿಳಿದಿದ್ದಾರೆ. ಇಂದು ಸಂಜೆ ಪ್ರಧಾನಿ ಮೋದಿಯೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಯಲಿದೆ.
2020ರಲ್ಲಿ ಲಡಾಖ್ ನ ಗಾಲ್ವಾನ್ ಪ್ರದೇಶದಲ್ಲಿ ಭಾರತ ಹಾಗೂ ಚೀನಾ ನಡುವೆ ಸಂಘರ್ಷ ನಡೆದಿತ್ತು. ಹೀಗಾಗಿ ಎರಡು ದೇಶಗಳ ನಡುವಿನ ಸಂಬಂಧ ಹದಗಟ್ಟಿತ್ತು. ಈ ಘಟನೆಯ ಬಳಿಕ ಮೊದಲ ಬಾರಿಗೆ ಷಿ ಜಿನ್ ಪಿಂಗ್ ಭಾರತಕ್ಕೆ ಬಂದಿದ್ದಾರೆ. ಎರಡು ದೇಶಗಳ ನಡುವಿನ ಗಡಿ ವಿವಾದ ಹಾಗೂ ವ್ಯಾಪಾರ ಅಸಮತೋಲನ ವಿಚಾರ ಚರ್ಚೆಯಲ್ಲಿ ಮಹತ್ವದ ವಿಷಯಗಳಾಗಿವೆ.
ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಇಂಡೋನೇಷಿಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂಟೊ, ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಫೋಸಾ ಸೇರಿದಂತೆ ಬ್ರಿಕ್ಸ್ ಒಕ್ಕೂಟದ 11 ಸದಸ್ಯ ರಾಷ್ಟ್ರಗಳ ನಾಯಕರು ಭಾಗವಹಿಸಿದ್ದಾರೆ.


