LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೂದಿಹಾಳ-ಫೀರಾಪೂರ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳಿಸಿ: ರಂಜುಣಗಿ ಆಗ್ರಹ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ರೈತರ ಬಹುದಿನಗಳ ಕನಸಾಗಿರುವ ಬೂದಿಹಾಳ-ಫೀರಾಪೂರ ನೀರಾವರಿ ಯೋಜನೆಯನ್ನು ಸರ್ಕಾರ ಆದ್ಯತೆ ಮೇರೆಗೆ ಶೀಘ್ರ ಪೂರ್ಣಗೊಳಿಸಿ, ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ತಾಲೂಕಾಧ್ಯಕ್ಷ ಬಸವರಾಜ ರಂಜುಣಗಿ ಆಗ್ರಹಿಸಿದರು.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿದ ಅವರು, ಈ ಯೋಜನೆ ಪೂರ್ಣಗೊಂಡರೆ ಬೂದಿಹಾಳ, ಫೀರಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಎಕರೆ ಕೃಷಿಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದ್ದು, ರೈತರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ ಕೃಷಿ ಉತ್ಪಾದನೆಯೂ ಹೆಚ್ಚಾಗಲಿದೆ. ಈಗಾಗಲೇ ಯೋಜನೆಯ ಕಾಮಗಾರಿ ಹಲವು ಕಾರಣಗಳಿಂದ ವಿಳಂಬವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಈ ವಿಷಯದಲ್ಲಿ ವಿಶೇಷ ಗಮನ ಹರಿಸಿ ಯೋಜನೆಯನ್ನು ಶೀಘ್ರ ಕಾರ್ಯಗತಗೊಳಿಸಬೇಕು ಎಂದು ಒತ್ತಾಯಿಸಿದರು. ಯೋಜನೆ ಪೂರ್ಣಗೊಂಡರೆ ಈ ಭಾಗದ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ದೊರೆಯಲಿದ್ದು, ರೈತರ ಬದುಕಿನಲ್ಲಿ ಮಹತ್ತರ ಬದಲಾವಣೆ ತರಲಿದೆ ಎಂದು ಪ್ರಕಟಣೆಯಲ್ಲಿ ತಿಳಸಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST