LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶನಿವಾರ ಸಿಎಲ್ ಪಿ ಸಭೆ, ಶಾಸಕರು ದೆಹಲಿಗೆ ಬರಬೇಡಿ: ಡಿಕೆಶಿ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಶನಿವಾರ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಹೀಗಾಗಿ ಶಾಸಕರು ದೆಹಲಿಗೆ ಬರಬೇಡಿ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗೆ ಚರ್ಚೆ ನಡೆಸಲಾಗಿದೆ. ವೀಕ್ಷಕರಾಗಿ ಕೆ.ಸಿ ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೇವಾಲ್ ಬರಲಿದ್ದಾರೆ ಎಂದು ತಿಳಿಸಲಾಗಿದೆ.

ನನಗೆ ಸಂಪುಟ ದರ್ಜೆಯ ಸಚಿವ ಸ್ಥಾನ ಸಿಗುವ ಭರವಸೆ ಇದೆ. 2023ರಲ್ಲಿ ಸಿಗಬೇಕಿತ್ತು. ಆದರೆ, ಸಿಕ್ಕಿರಲಿಲ್ಲ. ಈ ಕುರಿತು ಹೈಕಮಾಂಡ್ ನಾಯಕರು ತೀರ್ಮಾನಿಸಲಿದ್ದಾರೆ ಎಂದು ಸಲೀಂ ಅಹ್ಮದ್ ಹೇಳಿದ್ದಾರೆ. ಇನ್ನು ಸ್ವಇಚ್ಛೆಯಿಂದ ರಾಜ್ಯ ರಾಜಕಾರಣಕ್ಕೆ ಬಂದಿಲ್ಲ. 7 ಬಾರಿ ಸಂಸದನಾಗಿದ್ದೆ. ಕೇಂದ್ರ ಸಚಿವನಾಗಿದ್ದೆ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಶನಿವಾರ ನಡೆಯಲಿರುವ ಸಿಎಲ್ ಪಿ ಸಭೆಯ ನಂತರ ನೂತನ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST