ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಗರದ ಸಶಸ್ತ್ರ ಮೀಸಲು ಪಡೆ ಕೇಂದ್ರದಲ್ಲಿ ಬುಧವಾರ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು. ಹುತಾತ್ಮ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸಿಎಂ, ನಾಡಿನ ಶಾಂತಿ, ನೆಮ್ಮದಿ, ಸುರಕ್ಷತೆಯ ಸಲುವಾಗಿ ಕರ್ತವ್ಯವನ್ನು ನಿಷ್ಠೆಯಿಂದ ನಿಭಾಯಿಸಿ ಪ್ರಾಣವನ್ನೇ ಅರ್ಪಿಸಿದ ವೀರ ಪೊಲೀಸ್ ಸಿಬ್ಬಂದಿಯ ಸೇವೆ, ಸಾಹಸ ಹಾಗೂ ತ್ಯಾಗವನ್ನು ನಾಡು ಎಂದಿಗೂ ಮರೆಯುವುದಿಲ್ಲ ಎಂದರು. ಗೃಹ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.


