ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಮಟ್ಟದ ಬದಲಾವಣಗೆ ಕ್ಷಣಗಣನೆ ಶುರುವಾಗಿದೆ. ನಾಯಕ್ತವ ಬದಲಾವಣೆ ವಿಚಾರ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿದೆ. ಮಂಗಳವಾರ ರಾತ್ರಿ ಬೆಂಗಳೂರಿಗೆ ಬಂದಿರುವ ಸಿಎಂ ಸಿದ್ದರಾಮಯ್ಯ, ಮೇ 28ರಂದು ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ. ಈ ಮೂಲಕ ಗುರುವಾರ ಎಲ್ಲ ವಿಚಾರಗಳಿಗೆ ತೆರೆ ಬೀಳಲಿದೆ.
ಮುಖ್ಯಮಂತ್ರಿಗಳ ಕಚೇರಿಗಳ ಮೂಲದಿಂದ ಮಾಹಿತಿ ಬುಧವಾರ ಬಂದಿದೆ. ಗುರುವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಗೆ ಸಮಯ ಕೇಳಿದ್ದಾರೆ. ಅಲ್ಲಿಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ ಆದಂತಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರಗೆ ಇಷ್ಟು ವರ್ಷಗಳ ಪರಿಶ್ರಮಕ್ಕೆ ಈಗ ಫಲ ಸಿಗುವ ಸಾಧ್ಯತೆಯಿದೆ.



