LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದುರಂತದ ನೋವು ಗೆಲುವಿನ ಸಂಭ್ರಮ ಅಳಿಸಿಹಾಕಿದೆ: ಸಿಎಂ ಸಿದ್ದರಾಮಯ್ಯ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಆರ್ ಸಿಬಿ ಗೆಲುವಿನ ವಿಜಯೋತ್ಸವದ ವೇಳೆ ದುರಂತವೊಂದು ನಡೆದಿದೆ. ಕಾಲ್ತುಳಿತದಿಂದಾಗಿ 11 ಜನರು ಪ್ರಾಣ ಕಳೆದುಕೊಂಡಿದ್ದಾರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು. ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ. ಪ್ರೀತಿ, ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಅಂತಾ ಹೇಳಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST