LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆರ್.ಡಿ ಪಾಟೀಲ ಪ.ಪೂ ವಿದ್ಯಾಲಯಕ್ಕೆ ಸಮಗ್ರ ವೀರಾಗ್ರಣಿ ಪ್ರಶಸ್ತಿ

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ತಾಲೂಕಾ ಮಟ್ಟದ ಗುಂಪು ಆಟಗಳಲ್ಲಿ ಪಟ್ಟಣದ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ 30 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಾಲಕರ ಖೋಖೋ ಪ್ರಥಮ, ಬಾಲಕರ ವ್ಹಾಲಿಬಾಲ್ ಪ್ರಥಮ, ಬಾಲಕಿಯರ ಕಬಡ್ಡಿ ಪ್ರಥಮ, ಬಾಲಕಿಯರ ವ್ಹಾಲಿಬಾಲ್ ದ್ವಿತೀಯ, ಬಾಲಕಿಯರ ಖೋಖೋ ದ್ವಿತೀಯ, ಬಾಲಕರ ಹಾಗೂ ಬಾಲಕಿಯರ ಟೆನಿಕ್ವಾಯಿಟ್ ದ್ವಿತೀಯ ಸ್ಥಾನ ಪಡೆದು, ಸಮಗ್ರ ವೀರಾಗ್ರಣೆ ಪ್ರಶಸ್ತಿಯನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ, ಉಪಪ್ರಾಚಾರ್ಯ ಪಿ.ವ್ಹಿ.ಮಹಲಿನಮಠ, ಎಸ್.ಎಚ್.ಜಾಧವ, ಸುನೀಲ ಪಾಟೀಲ, ಎನ್.ಬಿ.ಪೂಜಾರಿ, ಪ್ರಸನ್ನ ಜೋಗೂರ, ಎಸ್.ಎಸ್.ತಾಳಿಕೋಟಿ, ಶಿವಶರಣ ಬೂದಿಹಾಳ, ಬಿ.ಬಿ.ಜಮಾದಾರ, ಶಿವರಾಜ ಕುಂದಗೋಳ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ರೋಹಿತ ಸುಲ್ಪಿ, ರಾಹುಲ ನಾರಾಯಣಕರ್, ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ, ಸ್ನೇಹಾ ಕುಲಕರ್ಣಿ, ಸ್ನೇಹಾ ಧರಿ, ಲಕ್ಷ್ಮಿ ಕನ್ನೋಳ್ಳಿ, ಎಸ್.ಎಸ್.ಹೂಗಾರ, ರಾಹುಲ ದಾಸರ, ಐ.ಎಸ್.ಸಿಂಪಗೇರ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST