ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಮಾಜಿ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆ ಇದೀಗ ತಮಿಳುನಾಡು ರಾಜಕೀಯ ವಲಯದಲ್ಲಿ ಬಹುದೊಡ್ಡ ಸಂಚಲನ ಮೂಡಿಸಿದೆ. ಈ ಬಂಧನ ಒಂದು ತಮಾಷೆ. ಇದನ್ನು ಕಾನೂನಾತ್ಮಕವಾಗಿ ಎದುರಿಸುತ್ತೇನೆ ಅಂತಾ ಹೇಳಿದ್ದಾರೆ.
ತಂಜಾವೂರಿನಲ್ಲಿ ನಡೆದ ಕಾವೇರಿ ನದಿ ನೀರು ಹಂಚಿಕೆ ವಿಚಾರದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಮುಖ್ಯಮಂತ್ರಿ ವಿಜಯ್ ಜೋಸೆಫ್ ಹಾಗೂ ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಇದು ಟಿವಿಕೆ ಹಾಗೂ ಡಿಎಂಕೆ ನಡುವೆ ದೊಡ್ಡ ಸಂಘರ್ಷಕ್ಕೆ ಕಾರಣವಾಗಿದೆ.



