LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಂಎಲ್ಸಿ ಸ್ಥಾನಕ್ಕೆ ಸಿಪಿವೈ ರಾಜೀನಾಮೆ.. ಪಕ್ಷೇತರರಾಗಿ ಸ್ಪರ್ಧೆ

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ(Hubballi): ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆ ಸಂಬಂಧ ಬಿಜೆಪಿ ಎಂಎಲ್ಸಿ ಸಿ.ಪಿ ಯೋಗೇಶ್ವರ್ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರ ನಿವಾಸಕ್ಕೆ ಭೇಟಿ ಕೊಟ್ಟು ರಾಜೀನಾಮೆ ಪತ್ರವನ್ನು ಅವರಿಗೆ ಸಲ್ಲಿಸಿದರು. ಈ ಮೂಲಕ ಬಂಡಾಯದ ಬಾವುಟ ಹಾರಿಸಲು ಸಿದ್ಧವೆಂದು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ಪಕ್ಷ ಸೇರ್ಪಡೆಯಾಗುವುದಿಲ್ಲ. ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತೇನೆ ಎಂದು ಹೇಳುವ ಮೂಲಕ ತಮ್ಮ ಸ್ಪರ್ಧೆಯ ಬಗ್ಗೆ ಖಚಿತ ಪಡಿಸಿದ್ದಾರೆ. ಜೆಡಿಎಸ್ ನಾಯಕ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನಡುವೆ ಆರಂಭದಿಂದಲೂ ಮುಸುಕಿನ ಗುದ್ದಾಟ ನಡೆಯುತ್ತಿದೆ. ಸಿಪಿವೈಗೆ ಟಿಕೆಟ್ ಕೈ ತಪ್ಪಿಸುವ ರಾಜಕೀಯವನ್ನು ಹೆಚ್ಡಿಕೆ ಮಾಡಿದ್ದಾರಂತೆ. ಶಿಗ್ಗಾಂವ ಹಾಗೂ ಸಂಡೂರಿನಲ್ಲಿ ಜೆಡಿಎಸ್ ಪ್ರಭಾವ ಇಲ್ಲದ ಪರಿಣಾಮ ಅಲ್ಲಿ ಬಿಜೆಪಿ ಅಭ್ಯರ್ಥಿ, ತಾವು ಸ್ಪರ್ಧಿಸಿ ಗೆದ್ದಿದ್ದ ಚನ್ನಪಟ್ಟಣಕ್ಕೆ ಮಗ ನಿಖಿಲ್ ಗೆ ಟಿಕೆಟ್ ಕೊಡುವ ನಿಟ್ಟಿನಲ್ಲಿ ಸಿಪಿವೈಗೆ ಅಡ್ಡವಾಗಿದ್ದಾರಂತೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST