LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರಿಕೆಟಿಗ ರಿಂಕು ಸಿಂಗ್ ತಂದೆ ನಿಧನ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ತಂದೆ ಖಾನಚಾಂದ್ ಸಿಂಗ್ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ನೋಯ್ಡಾದ ಯಥಾರ್ಥ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಈ ವಾರ ಆರೋಗ್ಯದಲ್ಲಿ ಸಾಕಷ್ಟು ಗಂಭೀರತೆ ಕಂಡು ಬಂದಿತ್ತು. ಹೀಗಾಗಿ ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು.

ಟಿ-20 ವಿಶ್ವಕಪ್ ನಲ್ಲಿ ಆಡುತ್ತಿದ್ದ ರಿಂಕು ಸಿಂಗ್ ಕಳೆದ ರಾತ್ರಿ ನಡೆದ ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮೊದಲು ಮನೆಗೆ ತೆರಳಿದರು. ಈ ಬಗ್ಗೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST