ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಗುರುವಾರ ನಡೆದ 7 ಸ್ಥಾನಗಳ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ 11 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ. ಹೀಗಾಗಿ ಬಿಜೆಪಿ ಎರಡು ಸ್ಥಾನಗಳಲ್ಲಿ ಗೆದ್ದರೂ ಮತಗಳು ಕಡಿಮೆಯಾಗಿವೆ. ಬಿಜೆಪಿ ನಂಬಿ ಅಭ್ಯರ್ಥಿ ಹಾಕಿದ್ದ ಜೆಡಿಎಸ್ ನ ಏಕೈಕ ಅಭ್ಯರ್ಥಿಗೆ ಸೋಲಾಗಿದೆ. ಹೀಗಾಗಿ ಬಿಜೆಪಿ ರಾಜ್ಯ ನಾಯಕರನ್ನು ದೆಹಲಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ, ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅವರಿಗೆ ಜೂನ್ 23ರಂದು ದೆಹಲಿಗೆ ಬರಲು ಹೇಳಿದೆಯಂತೆ. ಅಡ್ಡಮತದಾನ ಸಂಬಂಧ ಸಿ.ಟಿ ರವಿ, ಎನ್.ಮಹೇಶ್, ಮಹೇಶ್ ಟೆಂಗಿನಕಾಯಿ ನೇತೃತ್ವದ ಸಮಿತಿಯೊಂದನ್ನು ರಚನೆ ಮಾಡಿದೆ. ಈ ಘಟನೆಯಿಂದ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಹೀಗಾಗಿ ಇಲ್ಲಿ ಯಾರ ತಲೆದಂಡವಾಗುತ್ತೆ ಅನ್ನೋ ಕುತೂಹಲ ಮೂಡಿದೆ.



