LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗಾಯನ ನಿಲ್ಲಿಸಿದ ಗಾನ ಕೋಗಿಲೆ ಎಸ್.ಜಾನಕಿ

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಭಾರತದ ಖ್ಯಾತ ಗಾಯಕಿ ಎಸ್.ಜಾನಕಿ(88) ಅವರು ಶನಿವಾರ ಸಂಜೆ ವಿಧಿವಶರಾಗಿದ್ದಾರೆ. ದಿಢೀರ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ದೇಶದ ರಾಜಕೀಯ ನಾಯಕರು, ಸಿನಿ ರಂಗದ ದಿಗ್ಗಜರು, ಅವರ ಕೋಟ್ಯಾಂತರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಗಾನ ಕೋಗಿಲೆ ಎಂದೇ ಖ್ಯಾತಿಗಳಿಸಿದ್ದರು. ದೇಶದ 17 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಅದರಲ್ಲೂ ಕನ್ನಡದ ಹಾಡುಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಹಾಡಿದ್ದು, ಅವರಿಗೆ ಬಹುದೊಡ್ಡ ಅಭಿಮಾನಿ ಬಳಗ ಇಲ್ಲಿದೆ. ನಾಲ್ಕು ಬಾರಿ ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಬರೋಬ್ಬರಿ 33 ಬಾರಿ ರಾಜ್ಯ ಜಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಮೈಸೂರಿನಲ್ಲಿ ವಾಸವಾಗಿದ್ದ ಅವರಿಗೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸಿಲ್ಲ. ದಿಢೀರ್ ಹೃದಯ ಸ್ತಂಭನವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಭಾರತ ಮಾತ್ರವಲ್ಲ ವಿಶ್ವದ ಅನೇಕ ಭಾಗಗಳಲ್ಲಿ ನೆಲೆಸಿರುವ ಅವರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯಕ್ರಿಯೆ ವಿಚಾರಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST