LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಲಿಂಡರ್ ಪೂರೈಕೆ ಸ್ಥಗಿತ: ಹೋಟೆಲ್ ಗಳು ಬಂದ್!

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಯುದ್ಧದ ಪರಿಣಾಮ ಭಾರತದಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ಭಾರಿ ಸಮಸ್ಯೆಯಾಗಿದೆ. ಈಗಾಗ್ಲೇ ವಾಣಿಜ್ಯ ಬಳಕೆಯ ಅಡುಗೆ ಅನಿಲ ಪೂರೈಕೆ ಸ್ಥಗತಿಗೊಳಿಸಲಾಗುವುದು ಎಂದು ಆಹಾರ ಇಲಾಖೆ ಸೂಚನೆ ನೀಡಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಇಂದು ರಾತ್ರಿಯ ಬಳಿಕ ಹೋಟೆಲ್ ಗಳು ಬಂದ್ ಆಗುವ ಸಾಧ್ಯತೆಯಿದೆ.

ಹುಬ್ಬಳ್ಳಿಯ ಹೋಟೆಲ್ ಸಂಘದಲ್ಲಿ 300ಕ್ಕೂ ಹೆಚ್ಚು ಸಸ್ಯಹಾರ, ಮಾಂಸಹಾರ ಅಂಗಡಿಗಳಿವೆ. ಬಾರ್ ಅಂಡ್ ರೆಸ್ಟೋರೆಂಟ್, ಸಣ್ಣ ಹೋಟೆಲ್ ಗಳು ಸೇರಿ 5 ಸಾವಿರಕ್ಕೂ ಹೆಚ್ಚು ಇವೆ. ಸಿಲಿಂಡರ್ ಸಮಸ್ಯೆಯಿಂದ ಅನಿವಾರ್ಯವಾಗಿ ಹೋಟೆಲ್ ಮುಚ್ಚಬೇಕಾಗುತ್ತದೆ ಎಂದು ಸಂಘದ ಕಾರ್ಯದರ್ಶಿ ರವೀಂದ್ರ ಗಾಯತೊಂಡೆ ಹೇಳುತ್ತಿದ್ದಾರೆ.

ಬೆಂಗಳೂರು ಹೋಟೆಲ್ ಸಂಘದವರು ಸಹ ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿದ್ದು, ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಾಗಿದ್ದು, ಹೋಟೆಲ್ ನಡೆಸುವುದು ಕಷ್ಟವಾಗಿದೆ. ಈಗಿರುವ ಸಿಲಿಂಡರ್ ಬಳಸಿಕೊಂಡು ಉಪಹಾರ ನೀಡಲಾಗುತ್ತಿದೆ. ಇದಾದ ಮೇಲೆ ಹೋಟೆಲ್ ಗಳು ಬಂದ್ ಮಾಡಬೇಕಾಗಿದೆ. 70 ದಿನಗಳವರೆಗೆ ಸಿಲಿಂಡರ್ ಪೂರೈಕೆಯಲ್ಲಿ ಸಮಸ್ಯೆಯಾಗಲ್ಲವೆಂದು ಕೇಂದ್ರ ಸರ್ಕಾರ ಹೇಳಿತ್ತು. ಈಗ ದಿಢೀರ್ ಪೂರೈಕೆ ನಿಲ್ಲಿಸಲಾಗಿದೆ. ಇದರಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ ಬಿದ್ದಿದ್ದು, ಸಂಬಂಧಪಟ್ಟ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಬೆಂಗಳೂರು ಹೋಟೆಲ್ ಸಂಘದ ಗೌರವಾಧ್ಯಕ್ಷ ಪಿ.ಸಿ ರಾವ್ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST