LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ನಟ ಅನಂತ್ ನಾಗ್ ಗೆ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರಿಗೆ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಲಭಿಸಿದೆ. 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಸ್ವರ್ಣ ಕಮಲ ಪದಕ, ರೇಶ್ಮೆ ಸಾಲು, 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ಈ ಪ್ರಶಸ್ತಿ ಹೊಂದಿದೆ. ಕನ್ನಡದಲ್ಲಿ ಡಾ.ರಾಜ್ ಕುಮಾರ್ ಬಳಿಕ ಈ ಪ್ರಶಸ್ತಿ ಪಡೆದ 2ನೇ ನಟನರಾಗಿದ್ದಾರೆ.

ಕಳೆದ 5 ದಶಕಗಳಲ್ಲಿ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸಹಜ ಅಭಿನಯದ ಮೂಲಕವೇ ಎಲ್ಲರನ್ನು ಸೆಳೆದವರು. ಹಾಸ್ಯ ಸೇರಿದಂತೆ ಹಲವು ರೀತಿಯ ಪಾತ್ರಗಳಲ್ಲಿ ನಾಯಕ ನಟರಾಗಿ, ಪೋಷಕ ನಟರಾಗಿ ಅಭಿನಿಸಿದ್ದಾರೆ. ಕನ್ನಡ, ಹಿಂದಿ, ಮರಾಠಿ, ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿಯೂ ಸಹ ನಟಿಸಿದ್ದಾರೆ.

ಈ ಕುರಿತು ಪ್ರಧಾನಿ ಮೋದಿ ಎಕ್ಸ್ ಖಾತೆಯಲ್ಲಿ ಕನ್ನಡದಲ್ಲಿಯೇ ಶುಭ ಕೋರಿದ್ದಾರೆ. ‘ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಪುರಸ್ಕೃತರಾದ ಖ್ಯಾತ ನಟ ಅನಂತ್ ನಾಗ್ ಅವರಿಗೆ ಅಭಿನಂದನೆಗಳು. ಭಾರತೀಯ ಚಿತ್ರರಂಗದಲ್ಲಿ, ಅದರಲ್ಲೂ ವಿಶೇಷವಾಗಿ ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಅವಿಸ್ಮರಣೀಯ ಛಾಪು ಮೂಡಿಸಿದ್ದಾರೆ. ಅತ್ಯುತ್ತಮ ಕಲಾವಿದರಿಗೆ ಸಂದ ಅರ್ಹ ಗೌರವ’ ಎಂದು ಶ್ಲಾಘಿಸಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST