LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆ.28ರ ತನಕ ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ(Murder) ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ನ್ಯಾಯಾಂಗ(judicial custody) ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ. 24ನೇ ಎಸಿಎಂಎಂ ನ್ಯಾಯಾಲಯ ಬುಧವಾರ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನವನ್ನು ಆಗಸ್ಟ್ 28ರ ತನಕ ವಿಸ್ತರಣೆ ಮಾಡಿ ಆದೇಶಿಸಲಾಯಿತು.

ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ವಿಡಿಯೋ ಕಾನ್ಫ್ ರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಯಿತು. ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್ ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಎ1 ಆರೋಪಿ ಪವಿತ್ರಾಗೌಡ ಸೇರಿದಂತೆ ಎಲ್ಲ 19 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ನಟ ದರ್ಶನ್(D Boss), ಆಪ್ತ ಗೆಳತಿ ಪವಿತ್ರಾಗೌಡ(Pavitragowda) ಸೇರಿದಂತೆ ಆರೋಪಿಗಳೆಲ್ಲ ಕಳೆದ 50ಕ್ಕೂ ಹೆಚ್ಚು ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST