LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರ ಖಂಡಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ 20ಕ್ಕೂ ಹೆಚ್ಚು ದಿನಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಶನಿವಾರ ಮಧ್ಯಾಹ್ನ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮೊದಲ ದಿನದಿಂದಲೇ ನಾನು ಇದರ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಇದರಿಂದ ಹಿಂದೆ ಸರಿದಿಲ್ಲ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ. ಮೇ 3ರಂದು ನಡೆದ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಲೀಕ್ ಆಗಿತ್ತು. ನಂತರ ಜೂನ್ 21ಕ್ಕೆ ಮರು ಪರೀಕ್ಷೆ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಸಾಮಾಜಿಕ ಹೋರಾಟಗಾರ ಸೊನಮ್ ವಾಂಗ್ಚೂಕ್ 23ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದರು. ಲಕ್ಷಾಂತರ ವಿದ್ಯಾರ್ಥಿಗಳು ಸಹ ಹೋರಾಟ ನಡೆಸಿದರು. ಜೂನ್ 20ರಂದು ಸಿಜೆಪಿ ಸಂಸತ್ ಚಲೋ ನಡೆಸಿತು. ಈ ವೇಳೆ ಹಿಂಸಾಚಾರ ನಡೆಯಿತು.

ಪ್ರಶ್ನೆಪತ್ರಿಕೆ ಸೋರಿಕೆಯಿಂದ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದು, ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು ಹಿಡಿದಿದ್ದು ಸಡಿಲಿಸಲಿಲ್ಲ. ಇವರ ಹೋರಾಟಕ್ಕೆ ಜಯ ಸಿಕ್ಕಿದೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST