LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ: ಪಾಲಿಕೆ ವ್ಯಾಪ್ತಿಯ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಮಹಾನಗರ ಪಾಲಿಕೆಯ ವ್ಯಾಪ್ತಿಯ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಪರಿಶಿಲನೆ ನಡೆಸಿದರು. ನಗರದ ನವಬಾಗ ಪ್ರದೇಶದ ಮುಖ್ಯ ರಸ್ತೆಯನ್ನು ನಿರ್ಮಿತಿ ಕೇಂದ್ರದಿಂದ ಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಸಿಸಿ ರಸ್ತೆಯ ಕಾಮಗಾರಿ ಪರಿಶಿಲನೆ ನಡೆಸಿದರು. ಇದರೊಂದಿಗೆ ನವಬಾಗ ಪ್ರದೇಶದಲ್ಲಿ ಈ ಹಿಂದೆ ಅತಿವೃಷ್ಟಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ ಹಾಗೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದರಿಂದ ಮಹಾನಗರ ಪಾಲಿಕೆಯ ವತಿಯಿಂದ ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಲ್ಲಿ ಮುಖ್ಯ ರಸ್ತೆಯ ಎರಡು ಬದಿಯಲ್ಲಿ ಮಳೆ ನೀರು ಚರಂಡಿ ನಿರ್ಮಿಸಲು ಕಾಮಗಾರಿ ತೆಗೆದುಕೊಳ್ಳಲಾಗಿದ್ದು, ಕೂಡಲೇ ಮಳೆ ನೀರು ಚರಂಡಿ ನಿರ್ಮಾಣ ಕಾಮಗಾರಿ ಪ್ರಾರಂಭಿಸಿ, ಮುಂಬರುವ ಮಳೆಗಾಲದ ಪೂರ್ವದಲ್ಲಿ ಈ ಕಾಮಗಾರಿ ಪೂರ್ಣಗೊಳಿಸಿ, ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ನವಬಾಗ ಪ್ರದೇಶದ ಈ ಮುಖ್ಯ ರಸ್ತೆಯ ಸೌಂದರ್ಯೀಕರಣ ಕುರಿತಂತೆ ರಸ್ತೆಯ ಮಧ್ಯ ಭಾಗದಲ್ಲಿ ವಿಭಜಕಗಳ ನಿರ್ಮಾಣ ಮಾಡಿ, ಅಲಂಕಾರಿಕ ವಿದ್ಯುತ್ ಕಂಬಗಳನ್ನು ಅಳವಡಿಸಲು ಕೂಡಲೇ ಟೆಂಡರ್ ಕರೆದು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಸೂಚಿಸಲಾಯಿತು. ನಗರದ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ಸ್ವಚ್ ಭಾರತ ಮಿಷನ್ 2.0 ಅಡಿ ಮಹಾನಗರ ಪಾಲಿಕೆಯಿಂದ ನಿರ್ಮಿಸಲಾದ ಸುಸ್ಥಿರತೆ, ಸುರಕ್ಷಿತೆ ಮತ್ತು ಸ್ವಚ್ಛತೆ ಆಧಾರಿತ ಸಾರ್ವಜನಿಕ Aspirational Toilet ಮಹತ್ವಾಕಾಂಕ್ಷೆಯ ಶೌಚಾಲಯ ಪರಿಶೀಲಿಸಿ, ಅತ್ಯಾಧುನಿಕ  ಶೌಚಾಲಯ ನಿರ್ಮಾಣ ಮಾಡಿರುವುದಕ್ಕಾಗಿ ಪ್ರಶಂಸಿದರು. ಮುಂಬರುವ ದಿನಗಳಲ್ಲಿ ಇದೇ ಮಾದರಿಯ ಶೌಚಾಲಯಗಳನ್ನು ನಿರ್ಮಾಣಕ್ಕೆ ಕಾರ್ಯಯೋಜನೆ ರೂಪಿಸುವಂತೆ ಸೂಚಿಸಿದ ಅವರು, ಅವುಗಳನ್ನು ನಿಯಮಿತವಾಗಿ ಹಾಗೂ ನಿರಂತರವಾಗಿ ಮೇಲುಸ್ತುವಾರಿ ವಹಿಸುವಂತೆಯೂ ಮತ್ತು ಬಸ್ ನಿಲ್ದಾಣದ ಆವರಣದಲ್ಲಿ ಬಯಲು ಬಹಿರ್ದೆಸೆ ನಿರ್ಬಂಧಿಸಿ, ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ಸೂಕ್ತ ತಿಳುವಳಿಕೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನಿಲ್ದಾಣದ ಸ್ವಚ್ಛತೆಯನ್ನು ಆದ್ಯತೆಯನ್ನಾಗಿಸಿಕೊಳ್ಳಬೇಕು ಎಂದು ಸೂಚಿಸಿದರು.

ಅಲ್ ಅಮೀನ್ ಮೆಡಿಕಲ್ ಕಾಲೇಜ್ ಹಿಂಭಾಗದ ನಮೋ ನಗರ ಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಮಹಾನಗರ ಪಾಲಿಕೆಯಿಂದ ನಿರ್ಮಿಸಲಾದ ಜಿ+1 ಮಾದರಿ ಮನೆಗಳಿಗೆ ಭೇಟಿ ನೀಡಿ, ಈ ಪ್ರದೇಶದಲ್ಲಿ ರಸ್ತೆಗಳ ನಿರ್ಮಾಣ, ಬೀದಿದೀಪಗಳ ಅಳವಡಿಕೆ, ಒಳಚರಂಡಿ ನಿರ್ಮಾಣ ಹಾಗೂ ಕುಡಿಯುವ ನೀರಿನ ಪೂರೈಕೆಗಳ ಕುರಿತು ಪರಿಶೀಲನೆ ಮಾಡಿ, ಬಾಕಿ ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು. ಈಗಾಗಲೇ ನಿರ್ಮಾಣಗೊಂಡ 300 ಮನೆಗಳ ಹಕ್ಕುಪತ್ರಗಳನ್ನು ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ವಿತರಿಸಿ, ಮನೆಗಳನ್ನು ಹಸ್ತಾಂತರಿಸಲಾಗಿರುತ್ತದೆ. ಅದರಂತೆ ನಾಲ್ಕು ತಿಂಗಳೊಳಗಾಗಿ ಬಾಕಿ ಉಳಿದ ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಿ, ಉಳಿದ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡಲು ಕ್ರಮ ಕೈಗೊಳ್ಳುವಂತೆ ಆಯುಕ್ತರಾದ ವಿಜಯ ಮೆಕ್ಕಳಕಿ ಅವರಿಗೆ ಸೂಚಿಸಿದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST