ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಶನಿವಾರ ಸಂಜೆ ನಡೆದ ಕಾಂಗ್ರೆಸ್ ಸಿಎಲ್ ಪಿ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಸಿಎಲ್ ಪಿ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಅವರ ಹೆಸರನ್ನು ನೂತನ ನಾಯಕನ ಆಯ್ಕೆಗೆ ಸಿದ್ದರಾಮಯ್ಯ ಸೂಚಿಸಿದರು. ಜಿ.ಪರಮೇಶ್ವರ್ ಅನುಮೋದಿಸಿದರು. ಇದನ್ನು ಎಲ್ಲ ಶಾಸಕರು ಒಪ್ಪಿಕೊಂಡರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ ಶಿವಕುಮಾರ್ ಆಯ್ಕೆ ಆಗಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಘೋಷಿಸಿದರು. ಈ ಎಲ್ಲ ಪ್ರಕ್ರಿಯೆ ಮುಗಿದ ಬಳಿಕ ಲೋಕಭವನದತ್ತ ಡಿ.ಕೆ ಶಿವಕುಮಾರ್ ತೆರಳಿ ಸರ್ಕಾರ ರಚನೆಗೆ ರಾಜ್ಯಪಾಲರನ್ನು ಕೋರಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿಕೆಶಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ.
ಜೂನ್ 3ರಂದು ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ ತಿಳಿಸಿದ್ದಾರೆ. ಲೋಕಭವನದ ಗಾಜಿನ ಮನೆಯಲ್ಲಿ ಬುಧವಾರ ಸಂಜೆ 5.15ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಸಚಿವ ಸಂಪುಟದಲ್ಲಿ 20 ಜನರಿಗೆ ಕೊಕ್ ಕೊಡಲಾಗುತ್ತಿದೆ ಎನ್ನಲಾಗುತ್ತಿದೆ. ಹಿಗಾಗಿ ಹೊಸದಾಗಿ ಯಾರಿಗೆಲ್ಲ ಸಚಿವ ಸ್ಥಾನ ಸಿಗುತ್ತೆ ಅನ್ನೋ ಕುತೂಹಲ ಮೂಡಿದೆ.



