LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇಡಿ ದಾಳಿ ಬೆದರಿಕೆಗೆ ಸಿದ್ದರಾಮಯ್ಯ ಹೆದರಲ್ಲ: ಡಿ.ಕೆ ಸುರೇಶ್

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಶುಕ್ರವಾರ ಮುಂಜಾನೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್, ಇಂತಹ ಬೆದರಿಕೆ ತಂತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೆದರುವುದಿಲ್ಲ. ದುರುದ್ದೇಶ ಹಾಗೂ ರಾಜಕೀಯ ಪ್ರೇರಿತವಾಗಿ ಕೇಂದ್ರ ಸರ್ಕಾರ ಇಡಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಈ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸ ನಡೆಸಿದೆ ಎಂದು ವಾಗ್ದಾಳಿ ನಡೆಸಿದರು.

ಮುಡಾದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 12ಕ್ಕೂ ಹೆಚ್ಚು ಅಧಿಕಾರಿಗಳು 20ಕ್ಕೂ ಹೆಚ್ಚು ಸಿಆರ್ ಪಿಎಫ್ ಭದ್ರತಾ ಸಿಬ್ಬಂದಿಯೊಂದಿಗೆ ಶುಕ್ರವಾರ ಮುಂಜಾನೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ನಗರದ ವಿವಿಧ ತಾಲೂಕು ಕಚೇರಿಗಳಲ್ಲಿಯೂ ದಾಖಲೆಗಳ ಪರಿಶೀಲನೆ ಕಾರ್ಯ ನಡೆದಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST