LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರ: ಜಿಲ್ಲೆಯಲ್ಲಿ 2 ಕಡೆ ಬೆಂಕಿ ಅನಾಹುತ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಗುಮ್ಮಟನಗರಿ ಜಿಲ್ಲೆಯಲ್ಲಿ ಎರಡು ಕಡೆ ಬೆಂಕಿ ಅನಾಹುತ ಸಂಭವಿಸಿದೆ. ಒಂದು ಕಡೆ ಕಬ್ಬಿನ ಹೊಲದಲ್ಲಿ ಹಾಗೂ ಇನ್ನೊಂದು ಕಡೆ ಬೇಕರಿಯಲ್ಲಿ ಬೆಂಕಿ ಅನಾಹುತ ನಡೆದಿದೆ. ಇದರಿಂದಾಗಿ ಸಾಕಷ್ಟು ಹಾನಿಯಾಗಿದೆ. ನಿಡಗುಂದಿ ಪಟ್ಟಣದಲ್ಲಿ ಚನ್ನಪ್ಪ ಮುಚ್ಚಂಡಿ ಎಂಬುವರಿಗೆ ಸೇರಿದ 8 ಎಕರೆ ಹೊಲದಲ್ಲಿ ಕಬ್ಬಿನ ಬೆಳೆಗೆ ಆಕಸ್ಮಿಕ ವಿದ್ಯುತ್ ತಗುಲಿ ಬೆಂಕಿ ಅವಗಡ ನಡೆದಿದೆ. ಸುಮಾರು 10 ಲಕ್ಷ ರೂಪಾಯಿ ನಷ್ಟವಾಗಿದೆ ಎನ್ನಲಾಗುತ್ತಿದೆ. ಮುದ್ದೇಬಿಹಾಳ ಹಾಗೂ ಬಸವನಬಾಗೇವಾಡಿಯ ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರು.

ಇನ್ನು ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಬೇಕರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸುಟ್ಟು ಹೋಗಿದೆ. ಅನಿಲಕುಮಾರ ಬಸಪ್ಪ ಹುನ್ನೂರ ಎನ್ನುವವರಿಗೆ ಸೇರಿದ ಸಿದ್ದೇಶ್ವರ ಬೇಕರಿಯಲ್ಲಿ ಈ ಘಟನೆ ನಡೆದಿದೆ. ಇದರಿಂದಾಗಿ ಅಂಗಡಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಹೋಗಿವೆ. ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST