ಪ್ರಜಾಸ್ತ್ರ ಸುದ್ದಿ
ದಾವಣಗೆರೆ(Davanagere): ಕಳೆದ ತಡರಾತ್ರಿ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯನನ್ನು ಕೊಲೆ ಮಾಡಿರುವ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರ ಗ್ರಾಮದಲ್ಲಿ ನಡೆದಿದೆ. ಅತಾವುಲ್ಲಾ(46) ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕತ್ತಿ, ಮಚ್ಚುಗಳಿಂದ ದಾಳಿ ಮಾಡಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಈ ಹತ್ಯೆ ನಡೆದಿದೆಯಂತೆ. ಭದ್ರಾವತಿ ಮೂಲದ ವ್ಯಕ್ತಿಗಳಿಂದ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಯಾರು ಕೊಲೆ ಮಾಡಿದ್ದು, ಇದರ ಹಿಂದಿನ ಉದ್ದೇಶ ಏನು? ಕೊಲೆಗಾರರಗೂ ಹತ್ಯೆಯಾದವನಿಗೂ ನೇರ ಸಂಬಂಧ ಏನಾದರೂ ಇತ್ತಾ ಅನ್ನೋದು ಸೇರಿದಂತೆ ಹಲವು ಕೋನಗಳಿಂದ ಚನ್ನಗಿರಿ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.



