ಪ್ರಜಾಸ್ತ್ರ ಸುದ್ದಿ
ದೇವರ ಹಿಪ್ಪರಗಿ(Devara Hipparagi): ತಾಲೂಕಿನ ಮಣ್ಣೂರ ಗ್ರಾಮದ ಹೊರವಲಯದ ಕೆರೆಯಲ್ಲಿ ಅಪರಿಚಿತ ಶವವೊಂದು ಸೋಮವಾರ ಮುಂಜಾನೆ ಪತ್ತೆಯಾಗಿದೆ. ಕೆರೆಯಲ್ಲಿ ಶವ ತೆಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಶವವನ್ನು ಹೊರ ತೆಗೆದು ಗುರುತು ಪತ್ತೆ ಹಚ್ಚುವ ಕಾರ್ಯ ನಡೆಸಲಾಗುತ್ತಿದೆ. ಮೃತ ವ್ಯಕ್ತಿ ಯಾರು, ಸಾವಿನ ಹಿನ್ನಲೆ ಏನು ಅನ್ನೋದರ ತನಿಖೆ ನಡೆಯುತ್ತಿದೆ. ದೇವರ ಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.



