LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ದೇವರ ಹಿಪ್ಪರಗಿ: ಕಾಲುವೆಗೆ ಬಿದ್ದು ಯುವಕ ಸಾವು

ಪ್ರಜಾಸ್ತ್ರ ಸುದ್ದಿ

ದೇವರಹಿಪ್ಪರಗಿ(Devara Hipparagi): ಯುವಕನೋರ್ವ ಕಾಲುವೆಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಗಂಗನಳ್ಳಿ ಗ್ರಾಮದ ಸಮೀಪದ ಕಾಲುವೆಯಲ್ಲಿ ನಡೆದಿದೆ. ತಾಲೂಕಿನ ಹಿಟ್ನಳ್ಳಿ ಗ್ರಾಮದ ರಾಯಪ್ಪ ಅಮೋಗಿ ಪೂಜಾರಿ(24) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಗಂಗನಳ್ಳಿ ಗ್ರಾಮದ ಸದೀಪ ಸಂಗನಗೌಡ ಬಸನಗೌಡ ಪಾಟೀಲ ಇವರ ಜಮೀನು ಹತ್ತಿರ ಕಾಲುವೆಯಲ್ಲಿ ಈಜಲು ಹೋಗಿ ಅಥವಾ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾನೆ ಆದರೂ ನನ್ನ ಮಗನ ಸಾವಿನಲ್ಲಿ ಸಂಶಯ ಇರುತ್ತದೆ ಎಂದು ಮೃತನ ತಂದೆ ದೇವರಹಿಪ್ಪರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವರಹಿಪ್ಪರಗಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST