ಪ್ರಜಾಸ್ತ್ರ ಸುದ್ದಿ
ದೇವರ ಹಿಪ್ಪರಗಿ(Devarahipparagi): ತಾಲೂಕಿನ ಜಾಲವಾದ ಗ್ರಾಮದಲ್ಲಿ ರಾತ್ರಿ ಮನೆಯ ಮುಂದಿನ ಕಟ್ಟಿ ಮೇಲೆ ಮಲಗಿದ್ದ ವೇಳೆ ಯುವಕನ ಕತ್ತು ಕೊಯ್ದು ಹತ್ಯೆ ಮಾಡಿರುವ ಭಯಾನಕ ಘಟನೆ ಗುರುವಾರ ರಾತ್ರಿ ನಡೆದಿದೆ. ಜಾಲವಾದ ಗ್ರಾಮದ ಇಸಾಕ್ ಬಾಗವಾನ(25) ಹತ್ಯೆಯಾದ ಯುವಕ ಎಂದು ತಿಳಿದು ಬಂದಿದೆ. ಮೃತನ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹತ್ಯೆಗೆ ಕಾರಣ ಹಾಗೂ ಆರೋಪಿಗಳ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


