ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಕರ್ನಾಟಕ ಸರ್ಕಾರದ ಆರ್ಥಿಕ ಸ್ಥಿತಿ ಎಷ್ಟು ಗಂಭೀರವಾಗಿದೆ ಎಂಬುದನ್ನು ಸ್ವತಃ ಹಣಕಾಸು ಇಲಾಖೆಯ ಪತ್ರವೇ ಜಗಜ್ಜಾಹೀರು ಮಾಡಿದೆ ಎಂದು ಜೆಡಿಎಸ್ ಹೇಳಿದೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. ರಾಜ್ಯ ಸರ್ಕಾರ ಈಗಾಗ್ಲೇ ಸಾಲ ಪಡೆಯುವ ಗರಿಷ್ಠ ಮಿತಿಯನ್ನು ಮೀರಿದೆ. ಹೊಸ ಯೋಜನೆಗಳಿಗೆ ಸಾಲ ಪಡೆಯಲು ಅವಕಾಶವಿಲ್ಲ ಎಂದು ವಿತ್ ಇಲಾಖೆ ಆತಂಕ ವ್ಯಕ್ತಪಡಿಸಿದೆ.
ಬಜೆಟ್ ನಿರ್ವಹಣೆ(FRBM) ಪ್ರಕಾರ ಆದಾಯ ಕೊರತೆ ಶೂನ್ಯವಾಗಿರಬೇಕಿತ್ತು. ಆದರೆ, ಈಗ ರಾಜ್ಯದ ಆದಾಯ ಕೊರತೆ ಭರ್ತಿ 22,957 ಕೋಟಿಗೆ ತಲುಪಿದೆ. ಅಭಿವೃದ್ಧಿ ಯೋಜನೆಗಳಿಗೆ ಬಿಡಿಗಾಸಿಲ್ಲದೆ ಬೊಕ್ಕಸ ಬರಿದಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ 10 ಸಾವಿರ ಕೋಟಿ ವೆಚ್ಚದ 15 ಸಾವಿರ ಕೋಟಿ ಕಿಲೋ ಮೀಟರ್ ರಸ್ತೆ ಯೋಜನೆ ಬ್ರೇಕ್ ಹಾಕಿದೆ. ಲೋಕೋಪಯೋಗಿ ಇಲಾಖೆ ಸೇರಿದಂತೆ 3 ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ನೀಡಬೇಕಾದ ಬಾಕಿ ಮೊತ್ತ ಬರೋಬ್ಬರಿ 36,136 ಕೋಟಿ. ರೈತರ ಹಿತ ಕಾಯಬೇಕಾದ ಸರ್ಕಾರ ಬಾಕಿ ಉಳಿಸಿಕೊಂಡಿರುವುದು ಕಣ್ಣಿಗೆ ಕಟ್ಟುವಂತಿದೆ.


