LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನ್ಯಾಯಬೆಲೆ ಅಂಗಡಿಗಳಿಗೆ ಗ್ಯಾರಂಟಿ ಸಮಿತಿ ಭೇಟಿ

ಪ್ರಜಾಸ್ತ್ರ ಸುದ್ದಿ

ಅಥಣಿ(Athani): ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಸದಸ್ಯರಾದ ಶಿವಾನಂದ ಸವದಾಗರ ಅವರು ತಾಲೂಕಿನಾದ್ಯಂತ ಹಲವಾರು ನ್ಯಾಯಬೆಲೆ ಅಂಗಡಿಗಳಿಗೆ (ಪಡಿತರ ಅಂಗಡಿ) ಭೇಟಿ ನೀಡಿ, ಕಾರ್ಯವೈಖರಿಯನ್ನು ಪರಿಶೀಲಿಸಿದರು. ತಾಲೂಕು ಸಮಿತಿ ಅಧ್ಯಕ್ಷರಾದ ಸಿದ್ಧಾರ್ಥ ಶಿಂಗೆ ಅವರ ನಿರ್ದೇಶನದ ಮೇರೆಗೆ ಶಿವಾನಂದ ಸವದಾಗರ ಅವರು ತಪಾಸಣಾ ಕಾರ್ಯವನ್ನು ನಡೆಸಿದರು. ಈ ವೇಳೆ ಅಲ್ಲಿನ ಫಲಾನುಭವಿಗಳೊಂದಿಗೆ ಸಮಾಲೋಚನೆ ನಡೆಸಿ, ಸರಿಯಾದ ವಿತರಣೆ ಆಗುತ್ತಿದೆಯೇ ಎಂದು ಖಚಿತಪಡಿಸಿಕೊಂಡರು.

ಈ ವೇಳೆ ಮಾತನಾಡಿದ ಅವರು, ಫಲಾನುಭವಿಗಳಿಗೆ ಪಡಿತರವನ್ನು ಸರಿಯಾದ ನಿಗದಿತ ಸಮಯದಲ್ಲಿ ಯಾವುದೇ ವಿಳಂಬವಿಲ್ಲದೆ ವಿತರಣೆ ಮಾಡಬೇಕು. ವಿತರಿಸುವ ಆಹಾರಧಾನ್ಯಗಳ ತೂಕ ಮತ್ತು ಅಳತೆಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಎಚ್ಚರವಹಿಸಬೇಕು. ಫಲಾನುಭವಿಗಳಿಗೆ ಸಂಪೂರ್ಣ ಪ್ರಮಾಣದಲ್ಲಿ ತಲುಪುವುದನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರನ್ನು ಸರಿಯಾಗಿ ತಲುಪಲು ಪಡಿತರ ವಿತರಣಾ ವ್ಯವಸ್ಥೆ ಅತ್ಯಂತ ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ, ಪಾರದರ್ಶಕತೆ ಮತ್ತು ದಕ್ಷತೆಯಿಂದ ಕಾರ್ಯನಿರ್ವಹಿಸುವಂತೆ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಸೂಚಿಸಿದರು.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST