LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹರಿಯಾಣ ಚುನಾವಣೆ: ಜುಲಾನಾ ಕ್ಷೇತ್ರದಿಂದ ಫೋಗೆಟ್ ಕಣಕ್ಕೆ

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ಹರಿಯಾಣ ವಿಧಾನಸಭಾ ಚುನಾವಣೆ(Election) ಹಿನ್ನಲೆಯಲ್ಲಿ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 23 ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆಗೊಳಿಸಲಾಗಿದೆ. ಇದರಲ್ಲಿ ಕುಸ್ತಿಪಟು ವಿನೀಶಾ ಫೋಗೆಟ್ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ ಕುಸ್ತಿಪಟು ವಿನೀಶಾ ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಶುಕ್ರವಾರಷ್ಟೇ ಅವರು ಕುಸ್ತಿಪಟು ಭಜರಂಗ್ ಪೂನಿಯಾ ಅವರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಹರಿಯಾಣ ಉಸ್ತುವಾರಿ ದೀಪಕ್ ಬಬಾರಿಯಾ ಸೇರಿದಂತೆ ಇತರರು ಸಭೆ ನಡೆಸಿ 32 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ 28 ಹಾಲಿ ಶಾಸಕರಿದ್ದಾರೆ. ಐವರು ಮಹಿಳೆಯರಿದ್ದಾರೆ. ವಿನೀಶಾ ಫೋಗೆಟ್ ಕಾಂಗ್ರೆಸ್ ಸೇರ್ಪಡೆಯಾಗಿರುವುದಕ್ಕೆ ಬಿಜೆಪಿ ನಾಯಕರು ಟೀಕಿಸುತ್ತಿದ್ದಾರೆ. ಭಾರತೀಯ ಕುಸ್ತಿ ಫಡರೇಷನ್ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ತಮ್ಮ ವಿರುದ್ಧದ ಹೋರಾಟದ ಹಿಂದೆ ಕಾಂಗ್ರೆಸ್ ಇದೆ ಎಂದು ಆರೋಪಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST