LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಾಯಿ, ಅಜ್ಜಿ, ಮಾವನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸಿಲಿಕಾನ್ ಸಿಟಿಯಲ್ಲಿ ಶನಿವಾರ ದುರಂತವೊಂದು ನಡೆದಿದೆ. ತಾಯಿ, ಅಜ್ಜಿ ಹಾಗೂ ಮಾವನನ್ನು ಕೊಂದು ವ್ಯಕ್ತಿಯೊಬ್ಬ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ. ಇದರಿಂದಾಗಿ ಸುತ್ತಲಿನ ಜನರು ಬೆಚ್ಚಿಬಿದ್ದಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದೆ.

ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ ಎಂಬಾತ ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಹಾಗೂ ಮಾವ ಸತೀಶ ಎಂಬುವರನ್ನು ಕೊಲೆ ಮಾಡಿದ್ದಾನೆ. ನಂತರ ಪರಾರಿಯಾಗಲು ನೋಡಿದ್ದಾನೆ. ಆಗ ಮನೆ ಮಾಲೀಕರು, ಸ್ಥಳೀಯರು ಹಿಡಿದು ರೂಮಿನಲ್ಲಿ ಕೂಡಿಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬರುವಷ್ಟರಲ್ಲಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಯಾವ ಕಾರಣಕ್ಕೆ ಈ ಕೃತ್ಯ ನಡೆಸಿದ ಅನ್ನೋದು ಸಧ್ಯಕ್ಕೆ ತಿಳಿದು ಬಂದಿಲ್ಲ. ಪೊಲೀಸ್ ತನಿಖೆ ನಡೆಯುತ್ತಿದೆ. ಮೃತ ಮಂಗಳಪ್ಪ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ನಂಜಮ್ಮ ಪೌರ ಕಾರ್ಮಿಕರಾಗಿದ್ದರು. ಸತೀಶ ಪ್ಲಂಬರ್ ಕೆಲಸ ಮಾಡುತ್ತಿದ್ದ. ಕೊಲೆ ಮಾಡಿದ ಪ್ರಶಾಂತ ಕ್ಯಾಬ್ ಚಾಲಕನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST