ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಇಂದು(ಬುಧವಾರ) ಸಂಜೆ 5.15ರ ಸುಮಾರಿಗೆ ಲೋಕಭವನದಲ್ಲಿ ಡಿ.ಕೆ ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೆ ಎಲ್ಲ ರೀತಿಯ ಸಕಲ ಸಿದ್ಧತೆಗಳು ನಡೆದಿವೆ. ಇನ್ನು ಕೆಲವೇ ಗಂಟೆಗಳಲ್ಲಿ ಡಿ.ಕೆ ಶಿವಕುಮಾರ್ ಕರ್ನಾಟಕದ ಮುಖ್ಯಮಂತ್ರಿಯಾಗಲಿದ್ದಾರೆ. ಇವರ ಸಚಿವ ಸಂಪುಟದಲ್ಲಿ ಯಾರೆಲ್ಲ ಇರುತ್ತಾರೆ ಅನ್ನೋ ಕುತೂಹಲವಿದ್ದು, ಕೆಲ ಮೂಲಗಳ ಪ್ರಕಾರ ಸಿದ್ದರಾಮಯ್ಯನವರ ಸಚಿವ ಸಂಪುಟದಲ್ಲಿದ್ದವರಿಗೆ ಮೊದಲ ಆದ್ಯತೆ ನೀಡಲಾಗಿದೆ.
ಜಿ.ಪರಮೇಶ್ವರ, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾ ರೆಡ್ಡಿ, ಎಂ.ಬಿ ಪಾಟೀಲ, ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಹೆಚ್.ಕೆ ಪಾಟೀಲ, ಸತೀಶ್ ಜಾರಕಿಹೊಳಿ, ಕೆ.ಜೆ ಜಾರ್ಜ್, ಈಶ್ವರ ಖಂಡ್ರೆ, ಭೈರತಿ ಸುರೇಶ, ಯು.ಟಿ ಖಾದರ್, ಶರಣಪ್ರಕಾಶ ಪಾಟೀಲ, ಯತೀಂದ್ರ ಸಿದ್ದರಾಮಯ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.



