ಪ್ರಜಾಸ್ತ್ರ ಸುದ್ದಿ
ಕೊಡಗು(Kodagu): ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಸೋಮವಾರ ರಾತ್ರಿ ಅಪಾರ ಪ್ರಮಾಣದಲ್ಲಿ ಮಳೆಯಾಗಿದೆ. ಮಡಿಕೇರಿ ತಾಲೂಕಿನ ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಅಲ್ಲದೆ ನದಿ ನೀರು ಉದ್ಯಾನವನ, ಸಮೀದ ಗದ್ದೆಗಳಿಗೂ ನುಗ್ಗಿದೆ.
ಇನ್ನು ವಿರಾಜಪೇಟೆ, ಸೋಮವಾರಪೇಟೆ, ಮಡಿಕೇರಿ, ಬಿರುನಾಣಿ ಸೇರಿದಂತೆ ಹಲವು ಭಾಗಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಇದರಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ.



