ಪ್ರಜಾಸ್ತ್ರ ಸುದ್ದಿ
ವಿಜಯನಗರ(Vijyanagara): ಎಲ್ಲೆಡೆ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಜಿಲ್ಲೆಯ ಹೊಸಪೇಟೆಯಲ್ಲಿ ದೇಶದ 2ನೇ ಅತಿ ಎತ್ತರದ ಧ್ವಜಸ್ತಂಭದಲ್ಲಿ ತ್ರಿವರ್ಣ ಧ್ವಜ ಹಾರಿತು. ಸಚಿವ ಕೆ.ಎಸ್.ಬಸವಂತಪ್ಪ ಶನಿವಾರ ಇಲ್ಲಿನ ಪುನೀತ್ ರಾಜಕುಮಾರ್ ತಾಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಮಾತನಾಡಿದ ಸಚಿವರು, ಗ್ಯಾರೆಂಟಿ ಯೋಜನೆಗಳ ಯಶಸ್ಸು, ಒಳಮೀಸಲಾತಿ ಹಾಗೂ ಉದ್ಯೋಗ ನೇಮಕಾತಿ ವಿಚಾರಗಳ ಕುರಿತು ಮಾತನಾಡಿದರು. ಇದರ ಜೊತೆಗೆ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಕೆಲವೊಂದಿಷ್ಟು ವಿಚಾರಗಳನ್ನು ಹಂಚಿಕೊಂಡರು. ಈ ವೇಳೆ ಶಾಸಕ ಎಚ್.ಆರ್.ಗವಿಯಪ್ಪ, ಗ್ಯಾರೆಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಪಿ.ಟಿ.ಪರಮೇಶ್ವರ ನಾಯ್ಕ, ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಜಾಹ್ವವಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.



