LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ: ಸ್ನೇಹಿತನನ್ನೇ ಹತ್ಯೆ ಮಾಡಿದರು!

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ(Hubballi): ರಾತ್ರಿ ಹಬ್ಬದಲ್ಲಿ ಭಾಗಿಯಾಗಿದ್ದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪನಕೊಪ್ಪ ಸರ್ಕಲ್ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಶಿವರಾಜ ಕಮ್ಮಾರ(23) ಕೊಲೆಯಾದ ಯುವಕ. ಈ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಇನ್ನು ಮೂವರು ಪತ್ತೆ ಕಾರ್ಯ ನಡೆದಿದೆ. ಹಳೆ ದ್ವೇಷ ಹಾಗೂ ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಘಟನೆ ಸಂಬಂಧ ಪೊಲೀಸರು ಸ್ಥಳ ಪರಿಶೀಲನೆ ಹಾಗೂ ಉಳಿದ ಆರೋಪಿಗಳ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ. ಹೀಗಾಗಿ ಕಿರಣ್ ಹಾಗೂ ಸುದೀಪ ರಾಯಪುರ ಎಂಬುವರನ್ನು ಕರೆದುಕೊಂಡು ಹೋಗಿದ್ದಾರೆ. ಹಳೇ ಹುಬ್ಬಳ್ಳಿ ರೈಲ್ವೆ ಕ್ವಾಟರ್ಸ್ ಹತ್ತಿರ ಹೋದಾಗ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾರೆ. ಆಗ ಪೊಲೀಸರು ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆಸ್ಪತ್ರೆಗೆ ಭೇಟಿ ಕೊಟ್ಟು ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿ ಆರೋಗ್ಯ ವಿಚಾರಿಸಿದರು. ಪಿಎಸ್ಐ ಸಾತಣ್ಣವರ ಹಾಗೂ ಮಂಜು ಆತ್ಮರಕ್ಷಣೆಗೆ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ಉಳಿದವರ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST