LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಅಕ್ಕಿ ಸಾಗಾಟ: ಅಕ್ಕಿ ಹಾಗೂ ವಾಹನ ವಶ

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ತಿಳಗುಳ ಗ್ರಾಮದಲ್ಲಿ ಹಾಗೂ ಇಂಡಿ ಪಟ್ಟಣದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ಕಿ ಹಾಗೂ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಇಂಡಿಯಲ್ಲಿ ವಾಹನ ಚಾಲಕ ಪರಾರಿಯಾಗಿದ್ದಾನೆ.

ತಿಳಗೋಳ ಗ್ರಾಮದಲ್ಲಿ ಟಾಟಾ ಎಸಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ವೇಳೆ ಆಹಾರ ಇಲಾಖೆ ಹಾಗೂ ಪೊಲಿಸ್ ಅಧಿಕಾರಿಗಳು ದಾಳಿ ನಡೆಸಿದ 7 ಪ್ಲಾಸ್ಟಿಕ್ ಚೀಲ್‌ಗಳಲ್ಲಿ ತುಂಬಿರುವ ಅಕ್ಕಿ ಹಾಗೂ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದು, ವಾಹನ ಚಾಲಕ ಸೈಫನ್ ಆಲಮೇಲ ವಿರುದ್ಧ ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಾವಿನ ಭವಿಷ್ಯ ಹೇಳುವ ಬಾವಿ ಇಲ್ಲಿದೆ ನೋಡಿ..!


https://www.youtube.com/watch?v=pIbEFEhMfxM&t=42s

ಇನ್ನು ಇಂಡಿ ಪಟ್ಟಣದ ಕುಂಬಾರ ಓಣಿಯ ರಸ್ತೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಅಧಿಕಾರಿಗಳು, 75,110 ರೂಪಾಯಿ ಮೌಲ್ಯದ 2,590 ಕೆಜಿ ಅಕ್ಕಿ ಹಾಗೂ ಗೂಡ್ಸ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಾಹನ ಚಾಲಕ ಪರಾರಿಯಾಗಿದ್ದು, ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಿಳಗೂಳ ಗ್ರಾಮದಲ್ಲಿ ನಡೆದ ದಾಳಿಯಲ್ಲಿ ದೇವರ ಹಿಪ್ಪರಗಿ ಆಹಾರ ನಿರೀಕ್ಷಕ ಅಮೋಘ ದಳವಾಯಿ ಹಾಗೂ ಇಂಡಿ ಪಟ್ಟಣದಲ್ಲಿ ನಡೆದ ದಾಳಿಯಲ್ಲಿ ಆಹಾರ ನಿರೀಕ್ಷಕ ಪರಮಾನಂದ ಹೂಗಾರ ಅವರು ನೇತೃತ್ವ ವಹಿಸಿದ್ದರು ಎಂದು  ಆಹಾರ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST