ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದಲ್ಲಿ ಮಳೆಯ ತೀವ್ರ ಕೊರತೆಯಿಂದ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಕ ಜಿಲ್ಲೆಗಳಲ್ಲಿ ಜನರು ಕುಡಿಯುವ ನೀರಿಗೂ ಸಮಸ್ಯೆ ಎದುರಿಸುವ ಪರಿಸ್ಥಿತಿ ಇದೆ. ಹೀಗಿರುವಾಗ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಮಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.
ಈ ಶಿಫಾರಸಿನ ಪ್ರಕಾರ 15 ದಿನಗಳಲ್ಲಿ 4.56 ಟಿಎಂಸಿ ನೀರು ಹರಿಸಬೇಕಾಗಿದೆ. ಕಾವೇರಿ ಜಲಾನಯದ ಪ್ರದೇಶದಲ್ಲಿ ಮಳೆಯ ಪ್ರಮಾಣ, ನೀರಿನ ಸಂಗ್ರಹ, ಒಳಹರಿವು ವಿಚಾರದ ಕುರಿತು ತಿಳಿದುಕೊಳ್ಳುವ ಸಲುವಾಗಿ ನಡೆಸಿದ ಸಿಡಬ್ಲುಆರ್ ಸಿ ಸಭೆಯಲ್ಲಿ ಇಂತಹದೊಂದು ಶಿಫಾರಸು ಮಾಡಲಾಗಿದೆ. ರಾಜ್ಯದ ಜನರೆ ನೀರಿಗಾಗಿ ಪರದಾಡುತ್ತಿರಬೇಕಾದರೆ ತಮಿಳುನಾಡಿಗೆ ನಿತ್ಯ 3,500 ಕ್ಯೂಸಿಕೆ ನೀರು ಬಿಡುಬೇಕು ಅನ್ನೋದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.



