LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ, ಜಿಟಿಡಿ ಹೆಸರೇ ಇಲ್ಲ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಉಪ(BY Election) ಚುನಾವಣೆಯ ಪ್ರಚಾರ ದಿನದಿಂದಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಇದೀಗ ಜೆಡಿಎಸ್ ಸ್ಟಾರ್ ಪ್ರಚಾರಕರ(Star Campaigner) ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಜೆಡಿಎಸ್ ಮಾಜಿ ಸಚಿವ, ಹಿರಿಯ ಶಾಸಕ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ(GTD) ಹೆಸರೇ ಇಲ್ಲ. ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುವಾಗ ಕುಮಾರಸ್ವಾಮಿ ವಿರುದ್ಧವೇ ವಾಗ್ದಾಳಿ ನಡೆಸಿದ್ದರು. ಪಕ್ಷದಿಂದ ಅಂತರ ಸಹ ಕಾಯ್ದುಕೊಂಡಿದ್ದಾರೆ. ಹೀಗಾಗಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಹೇಳಲಾಗುತ್ತಿದೆ.

ದೇವೇಗೌಡ, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಹೆಚ್.ಡಿ ರೇವಣ್ಣ, ಸಾ.ರಾ ಮಹೇಶ್, ಸುರೇಶ್ ಬಾಬು, ಹರೀಶ್ ಗೌಡ, ಮಲ್ಲೇಶ್ ಬಾಬು ಸೇರಿದಂತೆ 40 ಜನರು ಹೆಸರುಗಳಿವೆ. ಜಿಟಿಡಿ ಪುತ್ರ ಜಿ.ಡಿ ಹರೀಶ್ ಹೆಸರು ಸಹ ಇದರಲ್ಲಿದೆ. ಆದರೆ, ತಂದೆಯ ಹೆಸರನ್ನು ಕೈ ಬಿಡಲಾಗಿದೆ. ಇನ್ನು ಚನ್ನಪಟ್ಟಣ ಕ್ಷೇತ್ರ ಡಿಸಿಎಂ ಡಿ.ಕೆ ಶಿವಕುಮಾರ್ ವರ್ಸಸ್ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕುಟುಂಬದ ನಡುವಿನ ಕದನವಾಗಿದೆ. ಸಿ.ಪಿ ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್(Congress) ಸೇರಿ ಕಣಕ್ಕೆ ಇಳಿದಿದ್ದಾರೆ. ಬಿಜೆಪಿ-ಜೆಡಿಎಸ್(BJP-JDS) ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿದ್ದಾರೆ. ಈ ಕ್ಷೇತ್ರ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನ ಹಲವು ನಾಯಕರ ನಡುವಿನ ಜಿದ್ದಾಜಿದ್ದಿಯಾಗಿರುವುದು ಸತ್ಯ.
Advertisement

Author
Publisher and Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST